ಉಡುಪಿ, ಅ. 10 (DaijiworldNews/TA): ಬಿಜೆಪಿಯವರು ವಾಷಿಂಗ್ ಯಂತ್ರದಲ್ಲಿ ಭ್ರಷ್ಟಾಚಾರಿಗಳನ್ನು ಹಾಕಿ ತೊಳೆಯುತ್ತಾರೆ. ಬಿಜೆಪಿ ಸೇರಿದ ಕೂಡಲೇ ಅವರೆಲ್ಲರೂ ಪ್ರಾಮಾಣಿಕರಾಗಿ ಬಿಡುತ್ತಾರೆ. 25 ರಾಜಕಾರಣಿಗಳನ್ನು ಈ ರೀತಿ ಮಾಡಿದ್ದಾರೆ ಎಂದು ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ಶಾಸಕ ಪಪ್ಪಿ ಮನೆ ಮೇಲೆ ಇಡಿ ದಾಳಿ ಬಗ್ಗೆ ಉಡುಪಿಯಲ್ಲಿ ಶುಕ್ರವಾರ ಪತ್ರಕರ್ತರು ಕೇಳಿದ ಪ್ರಶ್ನೆಗೆ ಅವರು ಈ ರೀತಿ ಪ್ರತ್ರಿಯಿಸಿದರು. ಅಜಿತ್ ಪವರ್ ಮೇಲೆ 60 ಸಾವಿರ ಕೋಟಿ ರೂ. ಹಗರಣ ಆರೋಪ ಇತ್ತು. ಅವರನ್ನು ಬಿಜೆಪಿಗೆ ಕರೆದುಕೊಂಡು ಬಂದರು. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಅವರ ಮೇಲೂ ಆರೋಪ ಇತ್ತು. ಇಬ್ಬರೂ ಕೂಡ ಬಿಜೆಪಿಗೆ ಹಣ ಕೊಟ್ಟು ಸೇರ್ಪಡೆಯಾದರು.
ಶಾಸಕ ಪಪ್ಪಿ ಅವರು ಬಿಹಾರ ಚುನಾವಣೆಗೆ ದುಡ್ಡು ಕೊಟ್ಟಿಲ್ಲ. ಯಾರು ದುಡ್ಡು ಕೊಡುತ್ತಾರೋ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುತ್ತಾರೆ. ಇಡೀ ಮಹಾರಾಷ್ಟ್ರ ಚುನಾವಣೆಗೆ ಅಜಿತ್ ಪವಾರ್ ಹಣ ಕೊಟ್ಟಿದ್ದಾರೆ. ಬಿಜೆಪಿಯವರೇ ಅಜಿತ್ ಪವಾರ್ ವಿರುದ್ಧ ಆರೋಪಗಳನ್ನು ಮಾಡಿದ್ದರು ಎಂದು ತಿಳಿಸಿದರು.