ಕುಂದಾಪುರ, ಅ. 26 (DaijiworldNews/TA): ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಆರೋಗ್ಯ ಸೇವೆಗಳ ಲಭ್ಯತೆಯನ್ನು ಹೆಚ್ಚಿಸುವ ಉದ್ದೇಶದಿಂದ ಕುಂದಾಪುರದ ಶ್ರೀ ಸಾಯಿ ಆಸ್ಪತ್ರೆಯಲ್ಲಿ ಕೆಎಂಸಿ ಆಸ್ಪತ್ರೆ (ಮಂಗಳೂರು) ವತಿಯಿಂದ ಆರಂಭಿಸಲಾದ ತುರ್ತು ಹಾಗೂ ಅಪಘಾತ ಚಿಕಿತ್ಸಾ ಕೇಂದ್ರವನ್ನು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ. ಜಯಕರ ಶೆಟ್ಟಿ ಉದ್ಘಾಟಿಸಿದರು.










ಈ ಸಂದರ್ಭ ಮಾತನಾಡಿದ ಅವರು, ಕುಂದಾಪುರದಂತಹ ಅಭಿವೃದ್ಧಿ ಹೊಂದುತ್ತಿರುವ ಪ್ರದೇಶಗಳಿಗೆ ತುರ್ತು ಮತ್ತು ಅಪಘಾತ ಚಿಕಿತ್ಸಾ ಸೇವೆಗಳನ್ನು ವಿಸ್ತರಿಸುವುದು ಜೀವ ರಕ್ಷಣೆಯಲ್ಲಿ ಅತ್ಯಂತ ಪ್ರಮುಖ ಹೆಜ್ಜೆ. ತುರ್ತು ಪರಿಸ್ಥಿತಿಗಳಲ್ಲಿ ಸಮಯೋಚಿತ ವೈದ್ಯಕೀಯ ಪ್ರತಿಕ್ರಿಯೆ ಮತ್ತು ಉನ್ನತ ಚಿಕಿತ್ಸೆ ಲಭ್ಯತೆ ಜೀವ ಉಳಿಸುವಲ್ಲಿ ಮಹತ್ವದ ಪಾತ್ರವಹಿಸುತ್ತದೆ ಎಂದರು. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ ಶಂಕರ್ ಮಾತನಾಡಿ ಶುಭಹಾರೈಸಿದರು.
ಉಡುಪಿ ಯೂನಿಯನ್ ಬ್ಯಾಂಕಿನ ಪ್ರಾದೇಶಿಕ ಮುಖ್ಯಸ್ಥ ಅಶೋಕ್ ಭಂಡಗೆ, ಕೆಎಂಸಿ ಆಸ್ಪತ್ರೆಯ ತುರ್ತು ವೈದ್ಯಕೀಯ ವಿಭಾಗದ ಸಲಹೆಗಾರ ಮತ್ತು ಕ್ಲಸ್ಟರ್ ಮುಖ್ಯಸ್ಥ ಡಾ. ಜೀಧು ರಾಧಾಕೃಷ್ಣನ್, ಕೆಎಂಸಿ ಆಸ್ಪತ್ರೆ, ಮಂಗಳೂರಿನ ಮಾರ್ಕೆಟಿಂಗ್ ವಿಭಾಗದ ಸೀನಿಯರ್ ಮ್ಯಾನೇಜರ್ ರಾಕೇಶ್, ಕುಂದಾಪುರ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಪ್ರೇಮಾನಂದ ಹಾಗೂ ಐಎಂಎ ಕುಂದಾಪುರ ಅಧ್ಯಕ್ಷ ಡಾ.ಬಾಲಕೃಷ್ಣ ಶೆಟ್ಟಿ ಅವರುಗಳೂ ಭಾಗವಹಿಸಿದರು.
ಕುಂದಾಪುರದ ನ್ಯೂ ಮೆಡಿಕಲ್ ಸೆಂಟರ್ ನಿರ್ದೇಶಕ ಡಾ. ರಂಜನ್ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕವನ್ನಾಡಿದರು. ಕೆಎಂಸಿ ಆಸ್ಪತ್ರೆ, ಮಂಗಳೂರಿನ ಮಾರ್ಕೆಟಿಂಗ್ ವಿಭಾಗದ ಸೀನಿಯರ್ ಮ್ಯಾನೇಜರ್ ರಾಕೇಶ್, ಕೆಎಂಸಿ ಆಸ್ಪತ್ರೆಯ ತುರ್ತು ವೈದ್ಯಕೀಯ ವಿಭಾಗದ ಸಲಹೆಗಾರ ಮತ್ತು ಕ್ಲನ್ಸರ್ ಮುಖ್ಯಸ್ಥ ಡಾ. ಜೀಧು ರಾಧಾಕೃಷ್ಣನ್ ಶುಭಹಾರೈಸಿದರು.. ಕಾರ್ಯಕ್ರಮದಲ್ಲಿ ಉಡುಪಿ ಯೂನಿಯನ್ ಬ್ಯಾಂಕಿನ ಸತ್ಯಬ್ರುತು ಭಾತ್ರು, ಕುಂದಾಪುರ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಪ್ರೇಮಾನಂದ ಹಾಗೂ ಐಎಂಎ ಕುಂದಾಪುರ ಅಧ್ಯಕ್ಷ ಡಾ. ಬಾಲಕೃಷ್ಣ ಶೆಟ್ಟಿ,ಕೆಎಂಸಿಯ ಆಸ್ಪತ್ರೆಯ ದರ್ಶನ ಉಪಸ್ಥಿತರಿದ್ದರು.