ಕಾರ್ಕಳ, ಅ. 27 (DaijiworldNews/TA): ವ್ಯಕ್ತಿಯೊಬ್ಬರು ಅಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಆದಿತ್ಯವಾರ ಹೆಬ್ರಿಯ 38ನೇ ಕಳ್ತೂರು ಗ್ರಾಮದ ಸಂತೆಕಟ್ಟೆಯ ಮೂಲ್ಕಿ ಎಂಬಲ್ಲಿ ನಡೆದಿದೆ. ಮೃತರನ್ನು ಸಂತೆಕಟ್ಟೆಯ ಬಾಬು ನಾಯ್ಕ್(55) ಎಂದು ಗುರುತಿಸಲಾಗಿದೆ.

ಕೂಲಿ ಕೆಲಸ ಮಾಡಿಕೊಂಡಿದ್ದ ಇವರು ಪ್ರತಿದಿನ ಮನೆಯ ಪಕ್ಕದಲ್ಲಿರುವ ಕಟ್ಟೆ ಅಮ್ಮನವರ ದೇವಸ್ಥಾನದಲ್ಲಿ ಪೂಜೆ ಮಾಡುತ್ತಿದ್ದರು. ಆದಿತ್ಯವಾರ ವಿದ್ಯುತ್ ಇಲ್ಲದ ಕಾರಣ ಮನೆಯ ಎದುರಿನಲ್ಲಿರುವ ಬಾವಿಯಿಂದ ನೀರು ತರಲು ಹೋದಾಗ ಆಕಸ್ಮಿಕವಾಗಿ ಆಯತಪ್ಪಿ ಬಾವಿಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.