ಬಂಟ್ವಾಳ, ಅ. 27 (DaijiworldNews/AA): ಯಕ್ಷಾವಾಸ್ಯಮ್ ಕಾರಿಂಜ ಇದರ ಪಂಚಮ ವಾರ್ಷಿಕೋತ್ಸವ ಕಾರ್ಯಕ್ರಮ ನ.1ರಂದು ವಗ್ಗ ಕಾಡಬೆಟ್ಟು ಶ್ರೀ ಶಾರದಾ ಭಜನಾ ಮಂದಿರದಲ್ಲಿ ನಡೆಯಲಿದೆ ಎಂದು ಯಕ್ಷಾವಾಸ್ಯಮ್ ಸಂಚಾಲಕಿ ಸಾಯಿ ಸುಮಾ ನಾವಡ ಅವರು ತಿಳಿಸಿದರು.

ಬಿ.ಸಿ.ರೋಡ್ ಪ್ರೆಸ್ ಕ್ಲಬ್ನಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಕಾರ್ಯಕ್ರಮದಲ್ಲಿ ಹಿರಿಯ ಯಕ್ಷಗಾನ ಭಾಗವತರಾದ ರಂಗನಾಯಕ ಕುರಿಯ ಗಣಪತಿ ಶಾಸ್ತ್ರಿ ಅವರಿಗೆ 2025-26ನೇ ಸಾಲಿನ ಯಕ್ಷಾವಾಸ್ಯಮ್ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಯಕ್ಷಾವಾಸ್ಯಮ್ ಕಾರಿಂಜ ಸಂಸ್ಥೆಯು ಬಂಟ್ವಾಳ. ಕಾರಿಂಜ, ವಗ್ಗದಲ್ಲಿ ಕಳೆದ 4 ವರ್ಷಗಳಿಂದ ಯಕ್ಷಗಾನ ನಾಟ್ಯ, ಭಾಗವತಿಕೆ ತರಗತಿ ನಡೆಸುತ್ತಿದ್ದು, ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ವೇದಿಕೆ ಕಲ್ಪಿಸಿ ಅವರ ಪ್ರತಿಭಾ ವಿಕಸನಕ್ಕೆ ಅವಕಾಶ ಒದಗಿಸಲಾಗುತ್ತಿದೆ" ಎಂದು ಹೇಳಿದರು.
"ಈ ಬಾರಿ ಬೆಳಗ್ಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಮಾಜಿ ಸಚಿವ ಬಿ.ರಮಾನಾಥ ರೈ ಅವರು ಉದ್ಘಾಟನೆ ಮಾಡಲಿದ್ದಾರೆ. ಜಿ.ಪಂ. ಮಾಜಿ ಸದಸ್ಯ ಬಿ.ಪದ್ಮಶೇಖರ ಜೈನ್ ಅವರು ಅಧ್ಯಕ್ಷತೆ ವಹಿಸಲಿರುವರು. ವಾರ್ಷಿಕೋತ್ಸವ ಸಮಿತಿ ಅಧ್ಯಕ್ಷ ಜಯರಾಮ ಭಟ್ ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿರುವರು. ಮಂಜಪ್ಪ ನಾಯ್ಕ, ಬೊಮ್ಮಿ, ಶಾರದಾ ಜಿ.ಬಂಗೇರ, ಲೋಕಯ್ಯ ಗೌಡ, ವಾಸುದೇವ ಪ್ರಭು ಅವರಿಗೆ ಯಕ್ಷಾವಾಸ್ಯಮ್ ಗೌರವ ಸಮ್ಮಾನ ನಡೆಸಲಾಗುವುದು. ಬಳಿಕ ವಿದ್ಯಾರ್ಥಿಗಳಿಂದ ಪೂರ್ವ ರಂಗ, ಶ್ರೀ ಕೃಷ್ಣ ಲೀಲೆ ಯಕ್ಷಗಾನ ಪ್ರದರ್ಶನ ನಡೆಯಲಿದೆ" ಎಂದರು.
"ಮಧ್ಯಾಹ್ನ 2.30 ರಿಂದ ಸಭಾ ಪರ್ವ ನಡೆಯಲಿದ್ದು, ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಅವರು ಅಧ್ಯಕ್ಷತೆ ವಹಿಸುವರು. ಮಣಿಪಾಲ ಕೆಎಂಸಿ ಆಸ್ಪತ್ರೆಯ ವೈದ್ಯ ಡಾ.ಭಾಸ್ಕರಾನಂದ ಕುಮಾರ್, ಹಿರಿಯ ಯಕ್ಷಗಾನ ಕಲಾವಿದ ದಿನೇಶ್ ಶೆಟ್ಟಿ ಕಾವಳಕಟ್ಟೆ ಮತ್ತಿತರ ಗಣ್ಯರು ಭಾಗವಹಿಸಲಿರುವರು. ಇದೇ ವೇಳೆ ಯಕ್ಷಾವಾಸ್ಯಮ್ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತ್ಯಕ ಅಂಕ ಗಳಿಸಿದ ಸಂಸ್ಥೆಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಪುರಸ್ಕಾರ ನಡೆಸಲಾಗುವುದು, ಬಳಿಕ ವಿದ್ಯಾರ್ಥಿಗಳಿಂದ ಶ್ರೀ ದೇವೀ ಮಹಾತ್ಮೆ ಯಕ್ಷಗಾನ ಪ್ರದರ್ಶನ ನಡೆಯಲಿದೆ" ಎಂದು ಮಾಹಿತಿ ನೀಡಿದರು.
ವಾರ್ಷಿಕೋತ್ಸವ ಸಮಿತಿ ಉಪಾಧ್ಯಕ್ಷರಾದ ದೇವದಾಸ ಶೆಟ್ಟಿ, ಲತಾ ಆರ್. ಮಾಣಿಬೆಟ್ಟು, ಜೊತೆ ಕಾರ್ಯದರ್ಶಿ ಸುಮನಾ ಯಳಚಿತ್ತಾಯ ಅವರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.