ಬಂಟ್ವಾಳ, ಅ. 30(DaijiworldNews/TA): ಪಾಣೆಮಂಗಳೂರು ಹಳೆ ಸೇತುವೆಯಲ್ಲಿ ಇಲೆಕ್ಟ್ರಿಕ್ ಆಟೋ ರಿಕ್ಷಾ ನಿಲ್ಲಿಸಿ ನಾಪತ್ತೆಯಾಗಿದ್ದ ಮಾರ್ನಬೈಲು ನಿವಾಸಿ ಆಟೋ ಚಾಲಕ ಪ್ರೀತಂ ಲೋಬೋ ಅವರ ಮೃತದೇಹ ಗುರುವಾರ ನೇತ್ರಾವತಿ ನದಿಯ ಡ್ಯಾಂ ಸಮೀಪ ಮರವೊಂದರಲ್ಲಿ ಸಿಲುಕಿಕೊಂಡ ರೀತಿಯಲ್ಲಿ ಪತ್ತೆಯಾಗಿದೆ.

ರಿಕ್ಷಾದ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಬಂಟ್ವಾಳ ನಗರ ಠಾಣಾ ಪೋಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿಗಳು ನೇತ್ರಾವತಿ ನದಿಯಲ್ಲಿ ಶೋಧ ಕಾರ್ಯ ಕೂಡ ನಡೆಸಿದ್ದರು. ಇದೀಗ ಮೃತದೇಹ ಮರವೊಂದರಲ್ಲಿ ಸಿಲುಕಿಕೊಂಡ ರೀತಿಯಲ್ಲಿ ಪತ್ತೆಯಾಗಿದೆ.