ಕೊಲ್ಲೂರು, ನ. 04 (DaijiworldNews/AK): ಶ್ರೀಮೂಕಾಂಬಿಕಾ ದೇವಸ್ಥಾನದ ಅಧಿಕೃತ ವೆಬ್ಸೈಟ್ http://karnatakatemplesaccommodation.com ಬದಲಿಗೆ ಅಪರಿಚಿತರು ಅಕ್ರಮ ಲಾಭದ ಉದ್ದೇಶದಿಂದ karnatakatempleaccommodation ಎಂಬ ಹೆಸರಿನ ಅನಧಿಕೃತ ನಕಲಿ ವೆಬ್ಸೈಟ್ ರಚಿಸಿದ್ದು, ಈ ನಕಲಿ ವೆಬ್ಸೈಟ್ ಮೂಲಕ ಹಲವಾರು ಜನರಿಗೆ ಲಲಿತಾಂಬಿಕಾ ಅತಿಥಿ ಗೃಹದ ಕೊಠಡಿಯನ್ನು ಕಾಯ್ದಿರಿಸಿದ್ದಾರೆ.

ವಾಟ್ಸಾಪ್ ತಂತ್ರಾಂಶದಲ್ಲಿ ಪೋನ್ ಪೇಯ ಕ್ಯೂಆರ್ ಕೋಡ್ನ್ನು ನೀಡಿ ಹಣವನ್ನು ಪಡೆದು ನಕಲಿ ರಶೀದಿ ನೀಡಿ ವಂಚಿಸಿ ಹಣ ದೋಚುತ್ತಿರುವುದು ಕಂಡುಬಂದಿದೆ.
ದೇವಳದ ಭಕ್ತರಿಗೆ ದೇವಳದ ಕೊಠಡಿಗಳನ್ನು ಕಾಯ್ದಿರಿಸುವ ಬಗ್ಗೆ ವಂಚಿಸುತ್ತಿರುವ ಈ ನಕಲಿ ವೆಬ್ಸೈಟ್ ಜಾಲವನ್ನು ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ನೀಡಿದ ದೂರಿನಂತೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.