ಬಂಟ್ವಾಳ,ನ. 08 (DaijiworldNews/TA): ಮಾರಾಟ ಮಾಡುವ ಉದ್ದೇಶದಿಂದ ನಿಷೇಧಿತ ಅಮಲು ಪದಾರ್ಥಗಳನ್ನು ಹೊಂದಿದ್ದ ವ್ಯಕ್ತಿಯೋರ್ವನನ್ನು ಬಂಟ್ವಾಳ ಅಬಕಾರಿ ಪೊಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ಬಂಟ್ವಾಳದ ಬಿ.ಸಿ.ರೋಡಿನಲ್ಲಿ ನಡೆದಿದೆ.


ಉತ್ತರ ಪ್ರದೇಶ ಮೂಲದ ಸಂತೋಷ್ ಸೋಂಕರ್ (28) ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಈತನಿಂದ 58650 ರೂ ಮೌಲ್ಯದ ಸೊತ್ತುಗಳನ್ನು ವಶಪಡಿಸಿಲಾಗಿದೆ. 1173 ಪ್ಲಾಸ್ಟಿಕ್ ಸ್ಯಾಚೆಟ್ ಗಳಲ್ಲಿ ಗಾಂಜಾ ಪದಾರ್ಥವನ್ನು ಹೊಂದಿದ್ದು ,ಒಟ್ಟು 6 ಕೆಜಿ 590 ಗ್ರಾಂ ಗಾಂಜಾ ಉಂಡೆಗಳನ್ನು ಪತ್ತೆಹಚ್ಚಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆರೋಪಿ ಬಿ.ಸಿ. ರೋಡಿನ ರೈಲ್ವೆ ಹಳಿಯಲ್ಲಿ ಗಿರಾಕಿಗಳಿಗೆ ನೀಡುವು ಉದ್ದೇಶದಿಂದ ಅಲೆದಾಡುವ ಬಗ್ಗೆ ಮಾಹಿತಿ ಪಡೆದ ಅಬಕಾರಿ ಪೋಲೀಸರು ದಾಳಿ ನಡೆಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಲಯ ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.