ಸುಳ್ಯ, ನ. 08 (DaijiworldNews/TA): ಇಂಟರ್ ಲಾಕ್ ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾಗಿ ಚಾಲಕ ಮತ್ತು ನಿರ್ವಾಹಕ ಗಾಯಗೊಂಡ ಘಟನೆ ಸುಳ್ಯ ಅಜ್ಜಾವರ ಗ್ರಾಮದ ಮುಳ್ಯ ಎಂಬಲ್ಲಿ ಶುಕ್ರವಾರ ನಡೆದಿದೆ.

ಮುಳ್ಯದ ವ್ಯಕ್ತಿಯೊಬ್ಬರ ಮನೆಯ ಅಂಗಳಕ್ಕೆ ಇಂಟರ್ ಲಾಕ್ ಅಳವಡಿಸಲು ಇಂಟರ್ ಲಾಕ್ ತುಂಬಿಕೊಂಡು ಬರುತ್ತಿದ್ದ ಲಾರಿ ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕ ಮತ್ತು ನಿರ್ವಾಹಕರಿಬ್ಬರು ಗಾಯಗೊಂಡಿದ್ದಾರೆ.
ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ನಿರ್ವಾಹಕ ನವೀನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.