ಬೆಳ್ತಂಗಡಿ, ನ. 09 (DaijiworldNews/TA): ಮನೆ ಕಳ್ಳತನಕ್ಕೆ ಯತ್ನಿಸುತ್ತಿದ್ದ ವೇಳೆ ಸಿಕ್ಕಿ ಬಿದ್ದ ವ್ಯಕ್ತಿಯೊಬ್ಬನಿಗೆ ಸಾರ್ವಜನಿಕರು ಹಲ್ಲೆ ನಡೆಸಿ ಪೊಲೀಸರಿಗೆ ಮಾಹಿತಿ ನೀಡಿದ ಘಟನೆ ಬೆಳ್ತಂಗಡಿಯ ಮಾಲಾಡಿಯ ಬರ್ನ ಎಂಬಲ್ಲಿ ನಡೆದಿದೆ.

ಪ್ರಕರಣದ ಆರೋಪಿಯನ್ನು ಚೇತನ್ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆ ಕಳವಿಗೆ ಯತ್ನಿಸುತ್ತಿದ್ದಾಗ ಗಮನಿಸಿದ ನೆರೆಮನೆಯವರು ಸಾರ್ವಜನಿಕರ ಮೂಲಕ ಧರ್ಮದೇಟು ನೀಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಸದ್ಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.