ಉಡುಪಿ, ನ. 12 (DaijiworldNews/AA): ಪರ್ಕಳ ಪಟ್ಟಣದ ಬಳಿ ಕುಸಿದು ಬಿದ್ದಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೂಡಲೇ ಅವರನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಆಂಬುಲೆನ್ಸ್ ಮೂಲಕ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಗೆ ಸಾಗಿಸಿದರು.

ಆದರೆ, ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷೆ ನಡೆಸಿ ಆ ವ್ಯಕ್ತಿ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಮೃತದೇಹವನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
ಮೃತರ ಬಗ್ಗೆ ಮಾಹಿತಿ ಇರುವವರು ಅಥವಾ ಅವರ ಸಂಬಂಧಿಕರು ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ಅಥವಾ ಮಣಿಪಾಲ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ವಿನಂತಿಸಲಾಗಿದೆ.
ಮೃತರ ಬಳಿ ದೊರೆತ ಆಧಾರ್ ಕಾರ್ಡ್ನಲ್ಲಿ, ಅವರ ಹೆಸರು ದಾಮೋದರ ಗೌಡ (50), ಸಂತಟ್ಟು ಮನೆ, ಬಡಗಾಯಿ ಪದವು, ಮಂಗಳೂರು ಎಂದು ನಮೂದಾಗಿದೆ.