ಕಾಸರಗೋಡು,ನ. 13 (DaijiworldNews/AK): ಕೇರಳದಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಡಿ. 9, 11ರಂದು ಚುನಾವಣೆ ನಡೆಯಲಿದೆ. ಮತ ಎಣಿಕೆ ಡಿ. 13ರಂದು ನಡೆಯಲಿದೆ. ರಾಜ್ಯ ಚುನಾವಣಾ ಆಯುಕ್ತ ಎ ಷಾಜಹಾನ್ ಈಗಾಗಲೇ ಎರಡು ಹಂತದ ಚುನಾವಣೆಯನ್ನು ಘೋಷಿಸಿದ್ದಾರೆ.

ಇದರೊಂದಿಗೆ ರಾಜ್ಯದಲ್ಲಿ ನೀತಿ ಸಂಹಿತೆ ಅಸ್ತಿತ್ವಕ್ಕೆ ಬಂದಿದೆ. ಇನ್ನು ಇಂದು ಕಾಸರಗೋಡು ಜಿಲ್ಲಾಧಿಕಾರಿ ಇಂಪಾ ಶೇಖರ್ ಹೆಚ್ಚಿನ ಮಾಹಿತಿ ನೀಡಿದ್ದಾರೆ. ಕಾಸರಗೋಡು ಜಿಲ್ಲೆಗೆ ಡಿ. 11ರಂದು ಚುನಾವಣೆ ನಡೆಯಲಿದೆ. ಡಿಸೆಂಬರ್ 11 ರಂದು ನಡೆಯಲಿರುವ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನವೆಂಬರ್ 14ರಿಂದ ಆರಂಭಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಇಂಪಾ ಶೇಖರ್ ತಿಳಿಸಿದ್ದಾರೆ.
ಶುಕ್ರವಾರ ಚುನಾವಣಾ ಅಧಿಸೂಚನೆ ಹೊರ ಬೀಳಲಿದೆ. ನವೆಂಬರ್ 21 ರ ತನಕ ನಾಮಪತ್ರ ಸಲ್ಲಿಸಬಹುದು. ನವೆಂಬರ್ 22 ರಂದು ಸೂಕ್ಷ್ಮ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂತೆಗೆಯಲು ನವೆಂಬರ್ 24 ಕೊನೆ ದಿನವಾಗಿದೆ. ಕಾಸರಗೋಡು ಜಿಲ್ಲಾ ಪಂಚಾಯತ್, ಮೂರು ನಗರಸಭೆ, ಐದು ಬ್ಲಾಕ್ ಹಾಗೂ 39 ಗ್ರಾಮ ಪಂಚಾಯತ್ ಗಳಿಗೆ ಚುನಾವಣೆ ನಡೆಯಲಿದೆ. ಈ ಬಗ್ಗೆ ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.