ಕಾಸರಗೋಡು, ನ. 14 (DaijiworldNews/AA): ಮೀನು ಸಾಗಾಟದ ಲಾರಿಯೊಂದರ ಟಯರ್ ಸ್ಪೋಟಗೊಂಡ ಹಿನ್ನೆಲೆಯಲ್ಲಿ ರಸ್ತೆಗೆ ಲಾರಿ ಮಗುಚಿ ಬಿದ್ದ ಘಟನೆ ಕಾಸರಗೋಡಿನ ರಾಷ್ಟ್ರೀಯ ಹೆದ್ದಾರಿಯ ಮೊಗ್ರಾಲ್ ಪುತ್ತೂರು ನಲ್ಲಿ ಗುರುವಾರ ರಾತ್ರಿ ನಡೆದಿದೆ.



ಚಾಲಕ ವಿಜಿನ್ ಕುಮಾರ್ (35) ಸಣ್ಣ ಪುಟ್ಟ ಗಾಯ ಗಳೊಂದಿಗೆ ಪಾರಾಗಿದ್ದಾರೆ.
ಕೋಜಿಕ್ಕೋಡ್ ನಿಂದ ಉಳ್ಳಾಲಕ್ಕೆ ತೆರಳುತ್ತಿದ್ದ ಲಾರಿ ಟಯರ್ ಸ್ಪೋಟಗೊಂಡ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಲಾರಿ ಮಗುಚಿ ಬಿದ್ದು ದುರ್ಘಟನೆ ಸಂಭವಿಸಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಕ್ರೇನ್ ಮೂಲಕ ಲಾರಿಯನ್ನು ಮೇಲಕ್ಕೆತ್ತಿ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಮೀನುಗಳನ್ನು ಇತರ ಎರಡು ವಾಹನಗಳಿಗೆ ತುಂಬಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಅಪಘಾತದ ಬಳಿಕ ಎರಡು ಗಂಟೆ ಅಧಿಕ ಸಮಯ ಕಾಸರಗೋಡು - ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.