ಮಂಗಳೂರು, ನ. 15 (DaijiworldNews/AA): ಬಿಹಾರ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟಕ್ಕೆ ದೊರೆತ ಗೆಲುವು ಪ್ರಧಾನಿ ನರೇಂದ್ರ ಮೋದಿ ನಾಯಕತ್ವಕ್ಕೆ ಸಂದ ಜಯ ಎಂದು ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಹಾಗೂ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಬಿಹಾರದಲ್ಲಿ ಚುನಾವಣಾ ಫಲಿತಾಂಶದ ಕುರಿತು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಕಾಂಗ್ರೆಸ್ ನಾಯಕರ ವೋಟ್ ಚೋರಿ ಸುಳ್ಳು ಆರೋಪಕ್ಕೆ ಬಿಹಾರ ರಾಜ್ಯದ ಜನತೆ ತಕ್ಕ ಉತ್ತರ ಕೊಟ್ಟಿದ್ದಾರೆ. ಅಲ್ಲದೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಕೈಗೊಂಡಿರುವ ಅಭಿವೃದ್ಧಿ ಕಾರ್ಯವನ್ನು ಜನರು ನೆಚ್ಚಿಕೊಂಡಿದ್ದಾರೆ. ಹೀಗಾಗಿ ಬಿಹಾರದಲ್ಲಿ ಎನ್ಡಿಎ ಮೈತ್ರಿಕೂಟಕ್ಕೆ ಭರ್ಜರಿ ಜಯ ಸಿಕ್ಕಿದೆ" ಎಂದು ಹೇಳಿದರು.
"ದೇಶದಲ್ಲಿ ಪಕ್ಷ ಇನ್ನೂ ಬಲಿಷ್ಠವಾಗಿ ಸಂಘಟನೆಯಾಗಲಿದೆ. ಈ ಚುನಾವಣಾ ಫಲಿತಾಂಶ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಅಸ್ತಿತ್ವಕ್ಕೂ ಧಕ್ಕೆ ತರಲಿದೆ" ಎಂದು ಅಭಿಪ್ರಾಯಪಟ್ಟರು.