ಬೆಳ್ತಂಗಡಿ, ನ. 17 (DaijiworldNews/AA): ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾವೊಣದು ಪಲ್ಟಿಯಾಗಿ, 12 ವರ್ಷದ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಲಾಯಿಲ ಗ್ರಾಮದ ಕುತ್ರೊಟ್ಟು-ಟಿ.ಬಿ. ಕ್ರಾಸ್ ರಸ್ತೆಯ ಹೊಕ್ಕಿಲ ಎಂಬಲ್ಲಿ ನವೆಂಬರ್ 16ರ ತಡರಾತ್ರಿ ಸಂಭವಿಸಿದೆ.

ಮೃತನನ್ನು ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುಂಡಡ್ಕ ನಿವಾಸಿ ಗಣೇಶ್ ಅವರ ಪುತ್ರ ತನ್ವಿತ್ (12) ಎಂದು ಗುರುತಿಸಲಾಗಿದೆ.
ನಾವೂರಿನ ಶಶಿ ಎಂಬುವವರ ಆಟೋರಿಕ್ಷಾದಲ್ಲಿ ಪ್ರಯಾಣಿಕರು ಧರ್ಮಸ್ಥಳದ ಲಕ್ಷ ದೀಪೋತ್ಸವಕ್ಕಾಗಿ ತೆರಳುತ್ತಿದ್ದರು. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ತನ್ವಿತ್ನನ್ನು ಖಾಸಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ವಾಹನದಲ್ಲಿದ್ದ ಇತರ ಐವರು ಸಹ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳ್ತಂಗಡಿ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.