ಮಂಗಳೂರು, ನ. 17 (DaijiworldNews/AK):ಹೊರ ರಾಜ್ಯ ಹಾಗೂ ಅಂತರ್ ಜಿಲ್ಲೆಗಳಲ್ಲಿ ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿಯನ್ನು ಬಂಧಿಸಲಾಗಿದೆ.

ಆರೋಪಿ ಮಂಗಳೂರು, ಜೋಕಟ್ಟೆ ನಿವಾಸಿ ಅಬುಬಕ್ಕರ್ @ ಅಬ್ದುಲ್ ಖಾದರ್ @ ಇತ್ತೆ ಬರ್ಪೆ ಅಬುಬಕ್ಕರ್ (70) ಎಂದು ಗುರುತಿಸಲಾಗಿದೆ. ಅರೋಪಿತನಿಂದ ರೂ 5,65,000 ಮೌಲ್ಯದ 56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ.
ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತೂರು ಎಂಬಲ್ಲಿ ಅ.2 ರಿಂದ ಅ. 6 ನಡುವಿನ ಅವಧಿಯಲ್ಲಿ ಬೀಗ ಹಾಕಿದ್ದ ಮನೆಯೊಂದರಲ್ಲಿ ನಡೆದ ಸುಮಾರು 149 ಗ್ರಾಂ ತೂಕದ ಒಟ್ಟು 9,50,000 ರೂ. ಮೌಲ್ಯದ ಚಿನ್ನಾಭರಣಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 85/2025 ಕಲಂ 331(1), 331(4), 305 ಬಿ.ಎನ್. ಎಸ್. 2023 ರಂತೆ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಹೊರ ರಾಜ್ಯಗಳಲ್ಲಿ ಹಾಗೂ ಹಲವು ಜಿಲ್ಲೆಗಳಲ್ಲಿ ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಆರೋಪಿಯನ್ನು ಬಂಧಿಸಲಾಯಿತು.
ಆರೋಪಿತನಿಂದ ಸುಮಾರು 5,65,000 ರೂ. ಬೆಲೆಬಾಳುವ ಒಟ್ಟು 56.850 ಗ್ರಾಂ ತೂಕದ ಚಿನ್ನಾಭರಣಗಳು. ಮಂಗಳೂರು ಕೊಣಾಜೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಳವು ಮಾಡಿದ 60,000ರೂ. ಮೌಲ್ಯದ ದ್ವಿಚಕ್ರ ವಾಹನವನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದ್ದು, ಆರೋಪಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಪ್ರಕರಣದಲ್ಲಿ ಆರೋಪಿತರ ಪತ್ತೆ ಕಾರ್ಯದಲ್ಲಿ, ಬೆಳ್ತಂಗಡಿ ಡಿ.ವೈ.ಎಸ್. ಪಿ ರೋಹಿಣಿ ಸಿ.ಕೆ. ರವರ ಮಾರ್ಗದರ್ಶನದಂತೆ, ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ಬಿ.ಜಿ. ಸುಬ್ಬಾಪೂರ ಮಠ ರವರ ತಂಡ, ವೇಣೂರು ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಅಕ್ಷಯ್ ಡವಗಿ, ಓಮನ ಎನ್. ಹಾಗೂ ಎ.ಎಸ್. ಐ. ಗಳಾದ ವೆಂಕಟೇಶ್ ನಾಯ್ಕ, ಬೆನ್ನಿಚ್ಚನ್, ಹಚ್.ಸಿ. 405 ಕೃಷ್ಣ, ಧರ್ಮಸ್ಥಳ ಠಾಣಾ ಹಚ್.ಸಿ. 1016 ಪ್ರಶಾಂತ್, ಪಿ.ಸಿ. 975 ಚರಣ್, ವೇಣೂರು ಪೊಲೀಸ್ ಠಾಣಾ ಪಿ.ಸಿ. 2466 ಬಸವರಾಜ್, ಪಿ.ಸಿ. 434 ಮೋಹನ್, ಮಪಿಸಿ. 2306 ಶ್ರೀಮತಿ ಜಯಶ್ರೀ ಪೂಂಜಾಲಕಟ್ಟೆ ಪೊಲೀಸ್ ಠಾಣಾ ಪಿ.ಸಿ. 461 ರಜಿತ್ ಮಂಗಳೂರು ಜಿಲ್ಲಾ ಗಣಕ ಯಂತ್ರದ ಸಿಬ್ಬಂದಿಗಳಾದ ಸಂಪತ್ ಮತ್ತು ದಿವಾಕರ ರವರುಗಳನ್ನು ಒಳಗೊಂಡ ತಂಡ ಕರ್ತವ್ಯ ನಿರ್ವಹಿಸಿದ್ದಾರೆ.