ಬೆಳ್ತಂಗಡಿ,, ನ. 18 (DaijiworldNews/AK): ಸುಮಾರು 18 ಅಡಿ ಎತ್ತರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಪೇಯಿಂಟರ್ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿಯನ್ನು ಉಜಿರೆಯ ರೆಂಜಾಳ ನಿವಾಸಿ ಪ್ರಮೋದ್ ಗೌಡ (37) ಎಂದು ಗುರುತಿಸಲಾಗಿದೆ.
ಸುಮಾರು ಒಂದು ತಿಂಗಳ ಹಿಂದೆ ಪೇಯಿಂಟ್ ಬಳಿಯುವ ಕೆಲಸ ಮಾಡುತ್ತಿದ್ದಾಗ ಬಿದ್ದು ಬೆನ್ನುಮೂಳೆಯ ಗಂಭೀರ ಮುರಿತಕ್ಕೊಳಗಾಗಿದ್ದರು. ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರೆ.
ಅವರು ಪತ್ನಿ ಮತ್ತು ಮಗಳನ್ನು ಅಗಲಿದ್ದಾರೆ.