ಮಂಗಳೂರು, ನ. 19 (DaijiworldNews/AA): ನಾಪತ್ತೆಯಾದ ವ್ಯಕ್ತಿಗಳನ್ನು ಪತ್ತೆಹಚ್ಚಲು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ಪ್ರಾರಂಭಿಸಿದ ಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಇದೀಗ ಮತ್ತೊಂದು ಪ್ರಕರಣ ಯಶಸ್ವಿಯಾಗಿ ಇತ್ಯರ್ಥಗೊಂಡಿದೆ.

ಸುಮಾರು ಎಂಟು ವರ್ಷಗಳ ಹಿಂದೆ, ಅಂದರೆ ಆಗಸ್ಟ್ 25, 2018 ರಂದು ಕಾಣೆಯಾದ ಬಗ್ಗೆ ಪೀಟರ್ ಮೆಂಡೋನ್ಸಾ ಅವರ ಪ್ರಕರಣ ಕಂಕನಾಡಿ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆ, ನೆರೆಯ ಜಿಲ್ಲೆಗಳು ಮತ್ತು ಇತರ ರಾಜ್ಯಗಳಲ್ಲಿ ವ್ಯಾಪಕವಾಗಿ ಶೋಧ ಕಾರ್ಯಾಚರಣೆಗಳನ್ನು ನಡೆಸಲಾಗಿತ್ತು. ಈ ಕಾರ್ಯಾಚರಣೆಯ ಭಾಗವಾಗಿ ವಿವಿಧ ಆಶ್ರಮಗಳು ಮತ್ತು ಪುನರ್ವಸತಿ ಕೇಂದ್ರಗಳಿಗೆ ಭೇಟಿ ನೀಡಲಾಗಿತ್ತು.
ಕೊನೆಗೆ, ನವೆಂಬರ್ 8 ರಂದು, ಪೀಟರ್ ಮೆಂಡೋನ್ಸಾ ಅವರು ನಗರದ ವೆಲೆನ್ಸಿಯಾ ಚರ್ಚ್ ಬಳಿಯ ಆಶ್ರಮವೊಂದರಲ್ಲಿ ಪತ್ತೆಯಾಗಿದ್ದಾರೆ. ಕಂಕನಾಡಿ ಟೌನ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಟಿ. ಡಿ. ನಾಗರಾಜ್, ಸಬ್ ಇನ್ಸ್ಪೆಕ್ಟರ್ಗಳಾದ ಅನಿತಾ ಮತ್ತು ಶಿವಕುಮಾರ್, ಹಾಗೂ ಪೊಲೀಸ್ ಕಾನ್ಸ್ಟೆಬಲ್ ಶಿವಾನಂದ ಅವರನ್ನೊಳಗೊಂಡ ತಂಡವು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು.