ಬಂಟ್ವಾಳ, ,ನ. 19 (DaijiworldNews/AK):ಕಾರು ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಯುವ ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕಾವಳಕಟ್ಟೆಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.



ಮೃತಳನ್ನು ಕಡಬದ ಸುನಿಲ್ ಎಂಬವರ ಪುತ್ರಿ ಅನನ್ಯ (21) ಎಂದು ಗುರುತಿಸಲಾಗಿದ್ದು, ಅಪಘಾತದ ಸಮಯದಲ್ಲಿ ಅವರು ಸ್ಕೂಟರ್ ಸವಾರಿ ಮಾಡುತ್ತಿದ್ದರು.
ಗುರುವಾಯನಕೆರೆ ನಿವಾಸಿ ಪೃಥ್ವಿ ಎಂಬ ಹಿಂಬದಿ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರೂ ಮಂಗಳೂರಿನ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಎಂದು ವರದಿಯಾಗಿದೆ.