ಕಡಬ, ನ. 19 (DaijiworldNews/AK): ನೂಜಿಬಾಳ್ತಿಲಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಆಕೋಟ ನಿವಾಸಿ ಚೇತನ್ ಲಾರೆನ್ಸ್ ಎಂದು ಗುರುತಿಸಲಾಗಿದೆ.

ಕಡಬ ಸಮುದಾಯ ಆಸ್ಪತ್ರೆಯಲ್ಲಿ ಶವದ ಮಹಜರು ಮಾಡಲಾಗಿದೆ. ಇಂದು ನೂಜಿಬಾಳ್ತಿದ ಸೇಂಟ್ ಮೇರಿಸ್ ಕ್ಯಾಥೆಡ್ರಲ್ ಚರ್ಚಿನಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತೆರಡು ಪ್ರಕರಣದಲ್ಲಿ ಇಬ್ಬರು ಆತ್ಮಹತ್ಯೆಗೆ ಯತ್ನ
ಉಳಿಪು ನಿವಾಸಿ ರಾಕೇಶ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬಳಿಕ ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೊಬ್ಬರು ಕುಟ್ರುಪಾಡಿ ಕಾಯರಡ್ಕ ನಿವಾಸಿ ಜೋಬಿ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕಡಬ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.