ಪುತ್ತೂರು, ನ. 20 (DaijiworldNews/AK):ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮಾದಕ ದ್ರವ್ಯ ಸೇವನೆ ಮತ್ತು ಮಾರಾಟ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ತಪ್ಪಿತಸ್ಥರೆಂದು ನ್ಯಾಯಾಲಯ ಶಿಕ್ಷೆ ವಿಧಿಸಿದೆ.

ಅಪರಾಧ ಸಂಖ್ಯೆ 120/2023, NDPS ಕಾಯ್ದೆಯ ಸೆಕ್ಷನ್ 27(B) ಮತ್ತು 20(b)(ii)(A) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಉಪ್ಪಿನಂಗಡಿ ಪೊಲೀಸ್ ಉಪನಿರೀಕ್ಷಕ ರಾಜೇಶ್ ತನಿಖೆ ನಡೆಸಿ, ಅಗತ್ಯವಿರುವ ಎಲ್ಲಾ ಪುರಾವೆಗಳನ್ನು ಸಂಗ್ರಹಿಸಿ, ಆರೋಪಿಗಳಾದ ಸಲೀಮ್ ಹುಸೇನ್, ಶಹಾಜ್ ಅಹ್ಮದ್ ಮತ್ತು ಮೊಹಮ್ಮದ್ ಶಫಿ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ.
ವಿಚಾರಣೆ ನಡೆಸಿದ ನಂತರ, ಬೆಳ್ತಂಗಡಿಯಪಿ ಎಸ್ ಸಿ ಜೆ ಮತ್ತು ಜೆ ಎಂ ಎಫ್ ಸಿ ನ್ಯಾಯಾಲಯವು ಆರೋಪಿಯನ್ನು ತಪ್ಪಿತಸ್ಥ ಎಂದು ಘೋಷಿಸಿ, ಸೆಕ್ಷನ್ 27(B) ಅಡಿಯಲ್ಲಿ 10,000 ರೂ. ದಂಡ ಮತ್ತು ಒಂದು ವರ್ಷ ಸರಳ ಜೈಲು ಶಿಕ್ಷೆ ಮತ್ತು ಸೆಕ್ಷನ್ 20(B)(ii)(A) ಅಡಿಯಲ್ಲಿ 10,000 ರೂ. ದಂಡ ಮತ್ತು ಒಂದು ವರ್ಷ ಸರಳ ಜೈಲು ಶಿಕ್ಷೆ ವಿಧಿಸಿತು.
ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ದಿವ್ಯರಾಜ್ ಹೆಗ್ಡೆ ವಾದ ಮಂಡಿಸಿದರು.