ಕಾರ್ಕಳ, ನ. 22 (DaijiworldNews/AK):ಕ್ರೈಸ್ಟ್ ಕಿಂಗ್ ಸಂಸ್ಥೆಯ ವಿದ್ಯಾರ್ಥಿಗಳಾದ ಸ್ಮೃತಿ ಮರಾಟೆ ಮತ್ತು ಬ್ರೋವಿನ್ ಅಗೇರಾ ಮೈಸೂರು ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಕರ್ನಾಟಕ ಸರ್ಕಾರದ ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಉಪ ನಿರ್ದೇಶಕರ ಕಚೇರಿಯಿಂದ ಉಡುಪಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯನ್ನು ವಿವಿಧ ಕಾಲೇಜುಗಳಲ್ಲಿ ಏಕಕಾಲದಲ್ಲಿ ನಡೆಸಲಾಯಿತು.
ಸೈನ್ಸ್ ದ್ವೀತಿಯ ವಿಭಾಗದ ಸ್ಮೃತಿ ಮರಾಟೆ ಲಘು ಸಂಗೀತ (ಭಾವಗೀತೆ) ಗಾಯನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದರೆ. ಸೈನ್ಸ್ ಪ ವಿಭಾಗದ ಬ್ರೋವಿನ್ ಅಗೇರಾ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದರು.
ತಮ್ಮ ಅತ್ಯುತ್ತಮ ಪ್ರದರ್ಶನದೊಂದಿಗೆ, ಇಬ್ಬರೂ ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.