ಬೆಳ್ತಂಗಡಿ, ಡಿ. 01 (DaijiworldNews/TA): ಬೆಳ್ತಂಗಡಿಯ ಪರ್ಪಿಕಲ್ನಲ್ಲಿ ಭಾನುವಾರ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯನ್ನು ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ದೊಡ್ಡಗಾನಹಳ್ಳಿಯ ಪನ್ನ ಕೇಶವ ಗೌಡ ಅವರ ಪುತ್ರ ದೀಪಕ್ (24) ಎಂದು ಗುರುತಿಸಲಾಗಿದೆ.

ಮೂಲಗಳ ಪ್ರಕಾರ, ಧರ್ಮಸ್ಥಳದ ಕಡೆಗೆ ಹೋಗುತ್ತಿದ್ದ ಸರ್ಕಾರಿ ಬಸ್, ಧರ್ಮಸ್ಥಳದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹೆಚ್ಚಿನ ಚಿಕಿತ್ಸೆಗಾಗಿ ಮೃತದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಬೆಳ್ತಂಗಡಿ ಸಂಚಾರ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಕೈಗೊಂಡಿದ್ದಾರೆ.