ಉಡುಪಿ, ಡಿ. 06 (DaijiworldNews/AK):ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಬಸ್ ನಿಲ್ದಾಣದ ಬಳಿಯ ಭಾಗೀರಥಿ ಅಕ್ಕಿ ಗಿರಣಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ.

ಸಂಜೆ ವೇಳೆಗೆ ಬೆಂಕಿ ಹೊತ್ತಿಕೊಂಡು ಕಾರ್ಖಾನೆಯಲ್ಲಿ ಸಂಗ್ರಹಿಸಲಾಗಿದ್ದ ತೆಂಗಿನ ಎಣ್ಣೆ ಮತ್ತು ಕೊಬ್ಬರಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಯಿತು. ಗಿರಣಿಯ ಹೆಚ್ಚಿನ ಭಾಗ ಬೆಂಕಿಗೆ ಆಹುತಿಯಾಗಿದೆ.
ಉಡುಪಿಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.