ಬಂಟ್ವಾಳ, ಡಿ. 07 (DaijiworldNews/TA): ಕೇಂದ್ರ ಸರಕಾರವು ಕಾರ್ಮಿಕ ಕಾಯ್ದೆಗಳನ್ನು ತಿದ್ದುಪಡಿ ಮಾಡಿ ಕಾರ್ಮಿಕ ಸಂಹಿತೆಗಳಾಗಿ ಮಾಡಿರುವುದನ್ನು ತಡೆಯಲು ಹಾಗೂ ಅಕ್ಷರ ದಾಸೋಹ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ Aicctu ದಕ ಜಿಲ್ಲಾ ಸಮಿತಿ ವತಿಯಿಂದ ಬಿಸಿರೋಡ್ ಮಿನಿ ವಿಧಾನ ಸೌಧದ ಮುಂಭಾಗ ಪ್ರತಿಭಟನೆ ನಡೆಸಿ ತಹಶೀಲ್ದಾರರ ಮೂಲಕ ಕಾರ್ಮಿಕ ಸಚಿವರಿಗೆ ಮನವಿ ನೀಡಲಾಯಿತು.

ಪ್ರತಿಭಟನೆಯಲ್ಲಿ ಎಐಸಿಸಿಟಿಯು ಜಿಲ್ಲಾ ಅದ್ಯಕ್ಷ ರಾದ ರಾಮಣ್ಣ ವಿಟ್ಲ, ಜಿಲ್ಲಾ ಕಾರ್ಯದರ್ಶಿ ಮೋಹನ್ ಕೆ.ಇ. ಮಾತನಾಡಿದರು. ಎ.ಐ.ಸಿ.ಸಿ.ಟಿ.ಯು ಕೊಡಗು ಜಿಲ್ಲಾ ಅಧ್ಯಕ್ಷರಾದ ಮೋಹನ್ ವಿರಾಜ್ ಪೇಟೆ,ಮಾತನಾಡಿದರು. ಸಜೇಶ್ ವಿಟ್ಲ, ಸುಲೈಮಾನ್ ಕೆಲಿಂಜ, ಸಂಜೀವ ಬೆಳ್ತಂಗಡಿ, ಅಕ್ಷರ ದಾಸೋಹ ನೌಕರರ ಸಂಘದ ಅದ್ಯಕ್ಷರಾದ ಜಯಶ್ರೀ ಆರ್.ಕೆ, ಕಾರ್ಯದರ್ಶಿ ವಾಣಿಶ್ರೀ , ಮುಂತಾದವರು ಭಾಗವಹಿಸಿದ್ದರು.