ಉಡುಪಿ, ಡಿ. 10 (DaijiworldNews/AA): ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಮಸೀದಿ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.

ಕಿನ್ನಿಗೋಳಿಯ ರೋನಾಲ್ಡ್ ಡಿಸೋಜಾ (67) ಮೃತ ದುರ್ದೈವಿ.
ಉಚ್ಚಿಲದಿಂದ ಕಾಪು ಕಡೆಗೆ ಸಾಗುತ್ತಿದ್ದ ಬೈಕ್ ರಸ್ತೆ ದಾಟುತ್ತಿದ್ದ ರೋನಾಲ್ಡ್ ಡಿಸೋಜಾ ಅವರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಗಾಯಗೊಂಡವರನ್ನು ಸಮಾಜಿಕ ಕಾರ್ಯಕರ್ತ ಜಲಾಲುದ್ದೀನ್ ಉಚ್ಚಿಲ ಮತ್ತು ಹನೀಫ್ ಅವರ ಸಹಾಯದಿಂದ ಎಸ್ಡಿಪಿಐ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿತ್ತು.
ಈ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.