ಮಂಗಳೂರು, ಡಿ. 19 (DaijiworldNews/TA): ದ.ಕ ಜಿಲ್ಲೆಯಲ್ಲಿ ಯಾವುದೇ ರೀತಿಯ ಔಷಧಿಗಳ ಕೊರತೆ ಇಲ್ಲ ಎಂದು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ತಿಮ್ಮಯ್ಯ ತಿಳಿಸಿದ್ದಾರೆ.

ಈ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಅವರು, ಎಲ್ಲಾ ಔಷಧಗಳು ಜಿಲ್ಲೆಗೆ ಬರುತ್ತಿದ್ದು, ಗುಣಮಟ್ಟ ದೃಷ್ಠಿಯಿಂದ ಕ್ವಾರಂಟೈನ್ ನಲ್ಲಿ ಇಡಲಾಗಿದೆ ಎಂದು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಚ್.ಆರ್. ತಿಮ್ಮಯ್ಯ ತಿಳಿಸಿದರು. ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.