ಮಂಗಳೂರು, ಡಿ. 19 (DaijiworldNews/TA): ಪಿಲಿಕುಳದಲ್ಲಿ ಡಿ.20ರಿಂದ ಜ.4ರವರೆಗೆ ಪಿಲಿಕುಳ ಹಬ್ಬ ನಡೆಯಲಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ತಿಳಿಸಿದ್ದಾರೆ.


ಪ್ರತೀ ವರ್ಷದಂತೆ ಈ ವರ್ಷವೂ ಕೂಡ ವೈವಿಧ್ಯಮಯವಾದ ವಸ್ತು ಪ್ರದರ್ಶನ, ಆಹಾರೋತ್ಸವ, ಕ್ರೀಡೆ ಹಾಗೂ ಸಾಂಸ್ಕೃತಿಕ, ಮನರಂಜನೆ ಯನ್ನು ನೀಡುವುದರೊಂದಿಗೆ ಕರಾವಳಿ ಉತ್ಸವ ಡಿಸೆಂಬರ್ 20 ರಿಂದ ಪ್ರಾರಂಭವಾಗಲಿದ್ದು, ಜನವರಿ 31 ವರೆಗೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಆಕರ್ಷಕ ಸಾಂಸ್ಕೃತಿಕ ಮತ್ತು ಸಾಹಸಮಯ ಕಾರ್ಯಕ್ರಮ ಗಳನ್ನುಆಯೋಜಿಸಲಾಗುತ್ತಿದೆ. ಇದೇ ವೇಳೆ ಪಿಲಿಕುಳದಲ್ಲಿ ಡಿ.20ರಿಂದ ಜ.4ರವರೆಗೆ ಪಿಲಿಕುಳ ಹಬ್ಬ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ಧಾರೆ.
ಹಾಗು ರೈತ ಕುಡ್ಲ ಪ್ರತಿಷ್ಟಾನದ ನೇತೃತ್ವದಲ್ಲಿ ಪಿಲಿಕುಳ ಅಭಿವೃದ್ದಿ ಪ್ರಾಧಿಕಾರ ಮಂಗಳೂರು ಹಾಗೂ ಶ್ರೀ ಮಹಾಮಾಯಿ ಸ್ಪೋರ್ಟ್ಸ್ ಕ್ಲಬ್ ಉಳಾಯಿಬೆಟ್ಟು ಸಹಯೋಗದೊಂದಿಗೆ ಕಾರ್ಯಕ್ರಮ ನಡೆಯಲಿದೆ ಎಂದು ಅವರು ತಿಳಿಸಿದರು.