ಮಂಗಳೂರು, ಡಿ. 24 (DaijiworldNews/AA): ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಡೆಸುತ್ತಿರುವ ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ 2025 - 26ನೇ ಶೈಕ್ಷಣಿಕ ವರ್ಷದ ಪ್ರತಿಭಾ ಅಭಿನಂದನಾ ಕಾರ್ಯಕ್ರಮವು ಡಿಸೆಂಬರ್ 24 ರಂದು ಪಾದೆಗುತ್ತು ಲಿಂಗಪ್ಪ ಮಾಸ್ತರ್ ಸಭಾಂಗಣದಲ್ಲಿ ಅದ್ಧೂರಿಯಾಗಿ ನೆರವೇರಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಾರ್ಮೆಲ್ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ಸುರೇಶ್ ನಂದೊಟ್ಟು ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಶಾಲಾ ಪ್ರತಿಭಾ ದಿನಾಚರಣೆಯ ಅಗತ್ಯತೆ ಹಾಗೂ ವಿದ್ಯಾರ್ಥಿಗಳು ಅದನ್ನು ಸದುಪಯೋಗಪಡಿಸಿಕೊಳ್ಳುವ ರೀತಿಯನ್ನು ವಿವರಿಸಿ ಗ್ರಾಮೀಣ ಪ್ರದೇಶದಲ್ಲಿನ ವಿದ್ಯಾ ಸಂಸ್ಥೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂಬುದಾಗಿ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ವೇದಿಕೆಯಲ್ಲಿ 2024 - 25 ನೇ ಸಾಲಿನ ಎಸ್ ಎಸ್ ಎಲ್ ಸಿ ಯಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳನ್ನು ಗೌರವಿಸಿ ಸನ್ಮಾನಿಸಲಾಯಿತು. ಪ್ರಸಕ್ತ ಶೈಕ್ಷಣಿಕ ಸಾಲಿನ ಪ್ರತಿಭಾ ಕಾರಂಜಿ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ತಾಲೂಕು ಮಟ್ಟ, ಜಿಲ್ಲಾ ಮಟ್ಟ, ವಿಭಾಗ ಮಟ್ಟ ಹಾಗೂ ರಾಜ್ಯಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಗೌರವಿಸಿ ಸನ್ಮಾನಿಸಲಾಯಿತು. ಬಳಿಕ ಸಂಸ್ಥೆಯ ಎಲ್ಲಾ ವಿಭಾಗದ ಪ್ರಶಸ್ತಿ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಈ ವೇಳೆ ಉಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ರೇವತಿ ಮುದಲಾಡಿ ಉಪಸ್ಥಿತರಿದ್ದು ಸಂಸ್ಥೆಯ ಬೆಳವಣಿಗೆಗೆ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಗೌರವ ಉಪಸ್ಥಿತಿಯಲ್ಲಿದ್ದ ಕಕ್ಯಪದವಿನ ಅಂಬೇಡ್ಕರ್ ಯುವಕ ಸಂಘದ ಅಧ್ಯಕ್ಷರಾದ ರಾಜೀವ್ ಕೆ ಮಾತನಾಡಿ, ಸಂಸ್ಥೆಯು ಗ್ರಾಮೀಣ ಪ್ರದೇಶದಲ್ಲಿ ಬೆಳೆದು ಬಂದ ರೀತಿ ಹಾಗೂ ಸಂಸ್ಥೆಯೊಂದಿಗೆ ತಮ್ಮ ಸಹಕಾರದ ಮನೋಭಾವವನ್ನು ತಿಳಿಸಿ ಶುಭ ಹಾರೈಸಿದರು.
ಸಂಸ್ಥೆಯ ಕಾರ್ಯದರ್ಶಿ ಶಿವಾನಿ ಆರ್ ನಾಥ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಅಧ್ಯಕ್ಷೀಯ ಭಾಷಣದ ಮೂಲಕ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಚಾಲಕರಾದ ಬಬಿತಾ ಆರ್ ನಾಥ್, ಟ್ರಸ್ಟಿ ಜಯಾನಿ ಆರ್.ನಾಥ್, ಸಂಸ್ಥೆಯ ಮುಖ್ಯ ಶಿಕ್ಷಕಿ ವಿಜಯ ಉಪಸ್ಥಿತರಿದ್ದು, ಪೋಷಕರು ಸೇರಿದಂತೆ ಎಲ್ಲಾ ವಿದ್ಯಾರ್ಥಿಗಳು ಭಾಗಿಯಾಗಿದ್ದರು.
ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ ಅವರು ಪ್ರಾಸ್ತಾವಿಕ ನುಡಿಗಳ ಮೂಲಕ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸಂಯೋಜಕರಾದ ಯಶವಂತ್ ಜಿ.ನಾಯಕ್ ವಂದಿಸಿದರು.
ಕಾಲೇಜು ವಿಭಾಗದ ಉಪನ್ಯಾಸಕಿ ದೀಕ್ಷಿತ ಹಾಗೂ ಪ್ರೌಢಶಾಲಾ ವಿಭಾಗದ ಸಹ ಶಿಕ್ಷಕಿ ತೀರ್ಥಲತಾ ಕಾರ್ಯಕ್ರಮ ನಿರೂಪಿಸಿದರು.