ಬ್ರಹ್ಮಾವರ, ಡಿ. 26 (DaijiworldNews/AK): ಗುರುವಾರ ಮುಂಜಾನೆ ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಬಳಿ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ೯ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.




ಕೇರಳದಿಂದ ಗೋವಾಕ್ಕೆ ತೆರಳುತ್ತಿದ್ದಾಗ ಟೆಂಪೋ ಟ್ರಾವೆಲರ್ ಅಪಘಾತಕ್ಕೀಡಾಗಿದೆ. ಬ್ರಹ್ಮಾವರದ ಸಕ್ಕರೆ ಕಾರ್ಖಾನೆ ಪ್ರದೇಶದ ಬಳಿ ವಾಹನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿ ಬಿದ್ದಿದೆ. ಒಂಬತ್ತು ಮಂದಿ ಪ್ರಯಾಣಿಕರು ಗಂಭೀರ ಗಾಯಗಳಿಂದ ಪಾರಾಗಿದ್ದಾರೆ.
ಸ್ಥಳೀಯ ನಿವಾಸಿಗಳು ಮತ್ತು ರಸ್ತೆಯಲ್ಲಿ ಹೋಗುತ್ತಿದ್ದ ಜನರು ಸ್ಥಳಕ್ಕೆ ಧಾವಿಸಿ ಉರುಳಿಬಿದ್ದ ವಾಹನದಿಂದ ಪ್ರಯಾಣಿಕರನ್ನು ರಕ್ಷಿಸಲು ಸಹಾಯ ಮಾಡಿದರು.