ಕುಂದಾಪುರ,ಡಿ. 26 (DaijiworldNews/AK): 455 ವರ್ಷದ ಇತಿಹಾಸವುಳ್ಳ ಕೆನರಾದಲ್ಲೆ ಅತ್ಯಂತ ಪ್ರಾಚೀನ ಇಗರ್ಜಿಗಳಲ್ಲಿ ಎರಡನೇ ಇಗರ್ಜಿಯಾದ ಕುಂದಾಪುರದ ಹೋಲಿ ರೋಜರಿ ಇಗರ್ಜಿಯಲ್ಲಿ ಕ್ರಿಸ್ಮಸ್ ಹಬ್ಬ ಸಡಗರ ಭಕ್ತಿಭಾವದಿಂದ ದಿವ್ಯ ಬಲಿಪೂಜೆಯನ್ನು ಅರ್ಪಿಸುವ ಮೂಲಕ ಆಚರಿಸಲಾಯಿತು.


ಕ್ರಿಸ್ಮಸ್ ಪ್ರಯುಕ್ತ ಮಂಗಳೂರಿನ ಜೆಪ್ಪು ಸೆಮಿನರಿಯ ಪ್ರಾಧ್ಯಾಪಕ ವಂ।ಐವನ್ ಡಿಸೋಜಾ ದಿವ್ಯ ಬಲಿಪೂಜೆಯನ್ನು ಅರ್ಪಿಸಿದರು. ಬಳಿಕ ಮಾತನಾಡಿದ ಅವರು, ದೇವ ಪುತ್ರನು ಈ ಜಗತ್ತಿನಲ್ಲಿ ಮನುಷ್ಯನೊಂದಿಗೆ ಜೀವಿಸಲು ಮನುಷ್ಯನಾಗಿ ಹುಟ್ಟಿದ, ಮನುಷ್ಯ ಹೇಗೆ ಜೀವಿಸಬೇಕೆಂದು ತಿಳಿಸಲು ದೇವರು ಮನುಷ್ಯನಾಗಿ ಹುಟ್ಟಿದ, ಸಂತೋಷದ ವಿಚಾರ ಏನೆಂದರೆ, ದೇವರು ನಮ್ಮೊಂದಿಗೆ ಜೀವಿಸಲು ಬಂದಿದ್ದು. ಆದರೆ ಇಂದು ದೇವರು ನಮ್ಮೊಂದಿಗೆ ಭೇಟಿ ಮಾಡುವುದಿಲ್ಲ, ಆದರೆ ಇತರ ಮನುಷ್ಯರ ಮುಖಾಂತರ ನಮಗೆ ಸಹಾಯ ಮಾಡುತ್ತಾನೆ ಎಂದು ಹೇಳಿದರು.
ಚರ್ಚಿನ ಧರ್ಮಗುರು ಅತಿ ವಂ। ಪೌಲ್ ರೇಗೊ ಪವಿತ್ರ ಬಲಿಪೂಜೆಯಲ್ಲಿ ಭಾಗವಹಿಸಿ, ಶುಭಾಷಯ ಕೋರಿ ವಂದಿಸಿದರು. ಐಸಿವೈಎಮ್ ಸಂಘಟನೆಯಿಂದ ವಾಳೆಯವರಿಗಾಗಿ ಕೇಕ್ ವಿತರಿಸಲಾಯಿತು.