ಮಂಗಳೂರು, ಡಿ. 26 (DaijiworldNews/AK):ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ 101ನೇ ಜನ್ಮದಿನದ ಸ್ಮರಣೆಯ ಅಂಗವಾಗಿ ಬಿಜೆಪಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವತಿಯಿಂದ ಶಕ್ತಿನಗರದ ನಾಲ್ಯಪದವಿನ ಸರಕಾರಿ ಶಾಲೆಯಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.



ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ದೇಶ ಕಂಡ ಮಹಾನಾಯಕ ಅಟಲ್ ಜೀ ನೆನಪಿನಲ್ಲಿ ಬಿಜೆಪಿ ವತಿಯಿಂದ ದೇಶಾದ್ಯಂತ ಹಲವು ಸಾಮಾಜಿಕ ಸೇವಾ ಚಟುವಟಿಕೆಗಳು ನಡೆಯುತ್ತಿವೆ. ಅದರ ಭಾಗವಾಗಿ ನಮ್ಮ ಕ್ಷೇತ್ರದ ಈ ಶಾಲೆಯಲ್ಲಿ ಪರಿಸರಕ್ಕೆ ಪೂರಕವಾಗಿರುವ ಸಸಿಗಳನ್ನು ನೆಡಲಾಗುತ್ತಿದೆ. ಆ ಮೂಲಕ ದೇಶ ಕಂಡ ಅಪರೂಪದ ನಾಯಕರ ಸ್ಮರಣೆ ಮಾಡಲಾಗುತ್ತಿದೆ ಎಂದರು.
ಮಂಡಲದ ಅಧ್ಯಕ್ಷ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್, ಪ್ರಮುಖರಾದ ಪೂರ್ಣಿಮಾ, ಅಶ್ವಿತ್ ಕೊಟ್ಟಾರಿ, ಪೂರ್ಣಿಮಾ ರಾವ್, ಮೋಹನ್ ಪೂಜಾರಿ, ನಿಕಟ ಪೂರ್ವ ಪಾಲಿಕೆ ಸದಸ್ಯರುಗಳು, ಕಾರ್ಯಕರ್ತರು, ಶಾಲೆಯ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.