ಉಡುಪಿ, ಜ. 13 (DaijiworldNews/TA): ಹೆಗ್ಗುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸರಕಾರಿ ಸ್ಥಳದಲ್ಲಿ ನಿರ್ಮಿಸಲಾದ ಮನೆ ಮತ್ತು ಶೆಡ್ಗಳನ್ನು ತೆರವುಗೊಳಿಸಿದನ್ನು ಪ್ರಶ್ನಿಸಿ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮತ್ತು ಸಂಸದ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

ಶುಕ್ರವಾರ ತೆರವು ಕಾರ್ಯಾಚರಣೆಗೆಂದು ಬಂದಿದ್ದ ತಹಶಿಲ್ದಾರರಿಗೆ ಶಾಸಕರು ಮತ್ತು ಸಂಸದರು ಕೆಲವು ದಿನಗಳ ಕಾಲ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದ್ದರು. ಆದರೂ ಏಕಾಎಕಿ ಸೋಮವಾರ ಬೆಳ್ಳಂಬೆಳಿಗ್ಗೆ ಜೆಸಿಬಿ ತಂದು ಅಲ್ಲಿದ್ದ ಎಲ್ಲಾ ಮನೆಗಳನ್ನ ಧ್ವಂಸಗೊಳಿಸಿದ್ದಾರೆ. ಸರಕಾರಿ ಜಾಗದಲ್ಲಿ ಕೋಟಿಗಟ್ಟಲೇ ಮನೆ ಕಟ್ಟಿಕೊಂಡವರಿದ್ದಾರೆ, ಆದರೆ ನಮ್ಮ ಅಧಿಕಾರಿಗಳಿಗೆ ಬಡವರ ಮನೆ ಮೇಲೆ ಕಣ್ಣು. 20 ವರ್ಷಗಳಿಗೂ ಮಿಕ್ಕಿ ವಾಸ್ತವ್ಯ ಇದ್ದ ಇವರ ಮನೆಗಳನ್ನು ಕೆಡವಿದ್ದು ನಿಜಕ್ಕೂ ಆಕ್ಷೇಪಾರ್ಹ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.
ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಯಾರ ಆಣತಿ ಮೇರೆಗೆ ಈ ಕ್ರಮ ನಡೆದಿದೆ ಎನ್ನುವುದು ನಮಗೆ ಗೊತ್ತಿದೆ. ಈ ಒತ್ತಡ ಹೇರಿದವರಿಗೆ ಸಂಬಂಧಪಟ್ಟ ಮನೆಗಳೂ ಕೂಡ ಸರಕಾರಿ ಜಾಗದಲ್ಲಿದೆ. ಈ ಕುಟುಂಬಗಳಿಗೆ ನ್ಯಾಯ ದೊರಕುವವರೆಗೂ ಸುಮ್ಮನೆ ಕೂರುವ ಪ್ರಶ್ನೆಯೇ ಇಲ್ಲ. ತಹಶಿಲ್ದಾರರಿಂದ ಸರಿಯಾದ ಉತ್ತರ ಸಿಗುವ ವರೆಗೂ ಬಿಡುವ ಪ್ರಶ್ನೆಯೇ ಇಲ್ಲ ಎಂದರು.