ಮಂಗಳೂರು, ಜ. 21 (DaijiworldNews/AA): ನಿಯಂತ್ರಣ ತಪ್ಪಿದ ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ನಾಲ್ಕು ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ಸಂಭವಿಸಿದ ಘಟನೆ ಮಂಗಳೂರಿನ ಅಡ್ಯಾರ್ ಕಟ್ಟೆ ಬಳಿ ಮಂಗಳವಾರ ನಡೆದಿದೆ.






ಡಿಕ್ಕಿಯ ರಭಸಕ್ಕೆ ನಾಲ್ಕೂ ಕಾರುಗಳು ಜಖಂಗೊಂಡಿದ್ದು, ಒಂದು ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್, ಕಾರಿನಲ್ಲಿದ್ದ ಚಾಲಕರು ಯಾವುದೇ ಗಂಭೀರ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪಘಾತದ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು. ವಿಷಯ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ನಿಖರ ಕಾರಣದ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.