ಮಂಗಳೂರು, ಜ. 24 (DaijiworldNews/AA): ನಗರದ ಅಕ್ಬರ್ ಕಾಂಪ್ಲೆಕ್ಸ್ನಲ್ಲಿ ಶನಿವಾರ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡದಲ್ಲಿದ್ದ ಹಲವು ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ.

ಬೆಂಕಿಯ ಜ್ವಾಲೆಯು ಕಟ್ಟಡದ ಹಲವು ಮಳಿಗೆಗಳಿಗೆ ವ್ಯಾಪಿಸಿದ್ದು, ಇದರಿಂದಾಗಿ ಅಪಾರ ಪ್ರಮಾಣದ ಆಸ್ತಿ ಪಾಸ್ತಿ ನಷ್ಟವಾಗಿದೆ ಎಂದು ವರದಿಯಾಗಿದೆ.
ಬೆಂಕಿಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲವಾದರೂ, ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್ ಸರ್ಕ್ಯೂಟ್ ಈ ಅವಘಡಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.
ಘಟನೆಯಿಂದ ಸಂಭವಿಸಿದ ಒಟ್ಟು ನಷ್ಟದ ಪ್ರಮಾಣ ಹಾಗೂ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.