ಉಡುಪಿ, ಜ. 25 (DaijiworldNews/TA): ಸ್ಕೂಟರ್ ಗೆ ಕಂಟೈನರ್ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಲ್ಸಂಕ ಜಂಕ್ಷನ್ ಬಳಿಯ ಪಾಕಶಾಲೆ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಮೃತರನ್ನು ಮಣಿಪಾಲದ ಅವಿನಾಶ್ (29) ಎಂದು ಗುರುತಿಸಲಾಗಿದೆ. ಉಡುಪಿಯಿಂದ ಮಣಿಪಾಲ ಕಡೆ ಹೋಗುತ್ತಿದ್ದ ಕಂಟೈನರ್ ಲಾರಿಯು ಸ್ಕೂಟರ್ಗೆ ಢಿಕ್ಕಿ ಹೊಡೆದಿದ್ದು, ನಿಯಂತ್ರಣ ತಪ್ಪಿದ ಸ್ಕೂಟರ್ ರಸ್ತೆ ಬಿದ್ದಿದೆ. ಲಾರಿಯ ಚಕ್ರವು ಸವಾರದ ತಲೆಯ ಮೇಲೆ ಹರಿದಿದೆ. ಇದರಿಂದ ಗಂಭೀರವಾಗಿ ಗಾಯ ಗೊಂಡ ಸವಾರ ಸ್ಥಳದಲ್ಲಿಯೇ ಮೃತಪಟ್ಟರೆಂದು ತಿಳಿದುಬಂದಿದೆ. ಸ್ಥಳಕ್ಕೆ ಉಡುಪಿ ಸಂಚಾರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.