ಮಂಗಳೂರು, ಜ. 26 (DaijiworldNews/TA): ಮಹಾತ್ಮ ಗಾಂಧಿ ನಗರೋತ್ಥಾನ ಯೋಜನೆಯಡಿ ಕರ್ನಾಟಕದಲ್ಲಿ 12 ಮಹಾನಗರ ಪಾಲಿಕೆಗಳಿಗೆ 2400 ಕೋಟಿ. ರೂ. ಅನುದಾನವನ್ನು ಸರಕಾರ ನೀಡಿದೆ. ಶೀಘ್ರದಲ್ಲಿ ಮಂಗಳೂರಿನಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹೇಳಿದರು.

ಜೆಪ್ಪು ಮಹಾಕಾಳಿಪಡ್ಪು ರೈಲ್ವೇ ಅಂಡರ್ ಪಾಸ್ ಕೆಲ ಸೇತುವೆ ಉದ್ಘಾಟಿಸಿ ಮಾತನಾಡಿದ ಅವರು, ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಸುಮಾರು 49.90 ಕೋಟಿ ರೂ. ವೆಚ್ಚದ ಯೋಜನೆ ಕೈಗೊಂಡು ಮತ್ತು ಸಂಪರ್ಕ ರಸ್ತೆಗೆ ಮತ್ತು ನಿರ್ಮಾಣ ಕಾಮಗಾರಿಗೆ ನಗರಾಭಿವೃದ್ಧಿ ಇಲಖೆಯಿಂದ 7 ಕೋಟಿ ರೂ. ಖರ್ಚು ಮಾಡಿದ್ದೇವೆ.
ರಾಷ್ಟ್ರೀಯ 66 ಸಂಪರ್ಕಿಸುವ ಈ ರಸ್ತೆಯು ಹಂಪನಟ್ಟೆ, ಪಾಂಡೇಶ್ವರ, ಮಂಗಳಾದೇವಿ ವಾಣಿಜ್ಯ ಪ್ರದೇಶಗಳ ಸಂಪರ್ಕಕ್ಕೆ ಅನುಕೂಲವಾಗಿದೆ. ಈ ಕಾಮಗಾರಿಯನ್ನು ಅತ್ಯುನ್ನತ ಗುಣಮಟ್ಟದಿಂದ ಕೈಗೊಳ್ಳಲಾಗಿದೆ ಎನ್ನುವುದಕ್ಕೆ ಹೆಮ್ಮೆಯಾಗುತ್ತದೆ ಎಂದರು.