ಕಾಸರಗೋಡು, ಫೆ. 02 (DaijiworldNews/AK): 18 ವರ್ಷದ ಮಗಳನ್ನು ತಂದೆ ಕಡಿದು ಕೊಲೆಗೈದ ದಾರುಣ ಘಟನೆ ಮಂಜೇಶ್ವರ ಸಮೀಪದ ಕುಂಜತ್ತೂರು ತೂಮಿನಾಡು ಎಂಬಲ್ಲಿ ಇಂದು ಸಂಜೆ ನಡೆದಿದೆ. ಕೌಟುಂಬಿಕ ಕಲಹವೇ ಕೃತ್ಯಕ್ಕೆ ಕಾರಣ ಎನ್ನಲಾಗಿದೆ.




ತೂಮಿನಾಡಿನ ಜುಮೈಲಾ ಕೊಲೆಗೀಡಾದವಳು . ಕೃತ್ಯ ನಡೆಸಿದ ತಂದೆ ಉಮ್ಮರ್ ಫಾರೂಕ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಿರುಚಾಟದ ಶಬ್ದ ಕೇಳಿ ಪರಿಸರ ವಾಸಿಗಳು ಸ್ಥಳಕ್ಕೆ ಬಂದಾಗ ಬಾಲಕಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ. ಕೃತ್ಯ ನಡೆಯುವ ಸಮಯದಲ್ಲಿ ತಾಯಿ ಕೂಡಾ ಮನೆಯಲ್ಲಿದ್ದರು ಎನ್ನಲಾಗಿದೆ.
ವಿದೇಶದಲ್ಲಿದ್ದ ಉಮ್ಮರ್ ಫಾರೂಕ್ ಮೂರು ತಿಂಗಳ ಹಿಂದೆ ಊರಿಗೆ ಬಂದಿದ್ದನು. ಆಸ್ತಿಗಾಗಿ ಕುಟುಂಬದಲ್ಲಿ ಜಗಳ ನಡೆಯುತ್ತಿತ್ತು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.