ಉಡುಪಿ, ಫೆ. 08 (DaijiworldNews/TA): ಕೆಎಸ್ಆರ್ಟಿಸಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಭಾರಿ ಅವಘಡ ತಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಉಡುಪಿಯ ಕಟಪಾಡಿಯಲ್ಲಿ ಘಟನೆ ನಡೆದಿದೆ.

ಮಂಗಳೂರಿನಿಂದ ಗಜೇಂದ್ರಘಡಕ್ಕೆ ಸಂಚರಿಸುತ್ತಿದ್ದ ಬಸ್ ಇದಾಗಿದೆ. ಚಾಲಕ ತಕ್ಷಣ ಬಸ್ ನಿಲ್ಲಿಸಿ ಪ್ರಯಾಣಿಕರಿಗೆ ಇಳಿಯಲು ಅವಕಾಶ ಮಾಡಿಕೊಟ್ಟಿದ್ದಾರೆ. ಚಾಲಕನ ಡೋರ್ ನಿಂದ ಪ್ರಯಾಣಿಕರು ಬಸ್ ನಿಂದ ಕೆಳಗಿಳಿದಿದ್ದಾರೆ. ಇಲ್ಲಿ ಚಾಲಕನ ಸಮಯಪ್ರಜ್ಞೆಯಿಂದ ಭಾರಿ ಅವಘಡ ತಪ್ಪಿದಂತಾಗಿದೆ.