ಸುಳ್ಯ, ಫೆ. 09 (DaijiworldNews/TA): ಭಜನೆ ಬಗ್ಗೆ ಮಕ್ಕಳಲ್ಲಿ ಹೆಚ್ಚು ಆಸಕ್ತಿ ಮೂಡಿಸುವ ಕೆಲಸ ನಡೆಯಬೇಯಬೇಕಾಗಿದೆ ಎಂದು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮಿಗಳು ಹೇಳಿದರು.


ಸುಳ್ಯ ತಾಲೂಕು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್, ಕುಕ್ಕೇಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನ, ಮಂಜುನಾಥೇಶ್ವರ ಭಜನಾ ಪರಿಷತ್, ಭಜನೋತ್ಸವ ಸಮಿತಿ ಸುಬ್ರಹ್ಮಣ್ಯ ವಲಯ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳು ಮತ್ತು ಭಜಕರ ಸಹಯೋಗದಲ್ಲಿ ಫೆ.8 ರಂದು ಕುಕ್ಕೆ ಶ್ರೀಸುಬ್ರಹ್ಮಣೇಶ್ವರ ದೇವಸ್ಥಾನದ ರಥಿಬೀದಿ ಸಭಾಂಗಣದಲ್ಲಿ ಸುಳ್ಯ ತಾಲೂಕು ಭಜನೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಲಿಯುಗದಲ್ಲಿ ದೇವರನ್ನು ಒಲಿಸಿಕೊಳ್ಳಲು ಇರುವ ಸುಲಭ ಮಾರ್ಗ ಭಜನೆ.ಈ ಕೆಲಸ ಡಾ.ವೀರೇಂದ್ರ ಹೆಗ್ಗಡೆಯವರ ಮಾರ್ಗ ದರ್ಶನದಲ್ಲಿ ಭಜನೋತ್ಸವ ಮೂಲಕ ನಡೆಯುತ್ತಿದೆ ಎಂದು ಹೇಳಿದರು. ತಾಲೂಕು ಭಜನೋತ್ಸವ 2026 ಸಮಿತಿ ಅಧ್ಯಕ್ಷ ರವಿ ಕಕ್ಕೆಪದವು ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ, ಕುಕ್ಕೆ ಸುಬ್ರಹ್ಮಣ್ಯ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸುಳ್ಯ ತಾಲೂಕು ಅಧ್ಯಕ್ಷ ಲೋಕನಾಥ ಅಮೆಚೂರು ಮಾತನಾಡಿದರು.
ಭಜನಾ ಪರಿಷತ್ ರಾಜ್ಯ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್,ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ ಕಲ್ಲಾಜೆ, ಭಜನೋತ್ಸವ ಸಮಿತಿಯ ಗೌರವ ಸಲಹೆಗಾರರಾದ ವಿಮಲ ರಂಗಯ್ಯ ಸೇರಿದಂತೆ ಹಲವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.