ಉಡುಪಿ, ಮಾ. 13 (DaijiworldNews/AA): ಶಂಕರಪುರದ ಸಾಲ್ಮರ ಕ್ಯಾಟ್ರಿಂಗ್ ಶೆಡ್ ಸಮೀಪ ಯುವ ಅಡುಗೆ ಕೆಲಸಗಾರನೋರ್ವ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮೃತರನ್ನು ಗೌತಮ್ ಪೂಜಾರಿ ಎಂದು ಗುರುತಿಸಲಾಗಿದೆ.
ಸಾಲ್ಮರ ಕ್ಯಾಟ್ರಿಂಗ್ ಶೆಡ್ ಪಕ್ಕದ ಕೊಠಡಿಯೊಂದರಲ್ಲಿ ಗೌತಮ್ ಅವರ ಮೃತದೇಹ ಪತ್ತೆಯಾದಾಗ ಈ ಘಟನೆ ಬೆಳಕಿಗೆ ಬಂದಿದೆ. ಸಾವನ್ನಪ್ಪುವ ಮೊದಲು ಅವರು ಡೆತ್ನೋಟ್ ಬರೆದಿದ್ದಾರೆ ಎನ್ನಲಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.
ಅವಿವಾಹಿತರಾಗಿದ್ದ ಗೌತಮ್ ಪೂಜಾರಿ ಅವರು ಕ್ಯಾಟರಿಂಗ್ ಸಂಸ್ಥೆಯೊಂದರಲ್ಲಿ ಹೆಡ್ ಕುಕ್ ಆಗಿ ಕೆಲಸ ಮಾಡುತ್ತಿದ್ದರು. ಸಾಮಾಜಿಕವಾಗಿ ಗುರುತಿಸಿಕೊಂಡಿದ್ದ ಅವರು, ಸ್ಥಳೀಯ ಹಲವಾರು ಸಂಘ-ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು.
ಘಟನಾ ಸ್ಥಳಕ್ಕೆ ಶಿರ್ವ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.