ಪಡುಬಿದ್ರಿ, ಮಾ. 15 (DaijiworldNews/TA): ಮಿನಿ ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಾ.13ರಂದು ಸಂಜೆ ವೇಳೆ ಪಡುಬಿದ್ರಿಯ ನಂದಿಕೂರು ಗ್ರಾಮದ ಪಾಂಡ್ಯರ್ ಕಾಂಪ್ಲೆಕ್ಸ್ ಬಳಿ ನಡೆದಿದೆ. ಮೃತರನ್ನು ಲಿಂಗಪ್ಪ ಕಾಡ್ಯ ಶೆಟ್ಟಿ(77) ಎಂದು ಗುರುತಿಸಲಾಗಿದೆ.

ಪಡುಬಿದ್ರಿ ಕಡೆಯಿಂದ ಬರುತ್ತಿದ್ದ ಮಿನಿ ಟಿಪ್ಪರ್ ಲಾರಿಯು ರಸ್ತೆ ದಾಟಲು ರಸ್ತೆ ಬದಿಯಲ್ಲಿ ನಿಂತಿದ್ದ ಲಿಂಗಪ್ಪ ಅವರಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರ ವಾಗಿ ಗಾಯಗೊಂಡ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.