ಮಂಗಳೂರು/ಉಡುಪಿ, ಮಾ. 20 (DaijiworldNews/AA): ಗುರುವಾರ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಶುಕ್ರವಾರ ಈದುಲ್ ಫಿತ್ರ್ ಹಬ್ಬವನ್ನು ಆಚರಿಸಲಾಗುದು. ಈ ಹಿನ್ನಲೆ ಎರಡೂ ಜಿಲ್ಲೆಯಾದ್ಯಂತ ರಜೆ ಘೋಷಿಸಲಾಗಿದೆ.

ಚಂದ್ರ ದರ್ಶನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಈದುಲ್ ಫಿತ್ರ್ ಶುಕ್ರವಾರ ನಡೆಯಲಿರುವುದರಿಂದ ಎಡರೂ ಜಿಲ್ಲೆಯಾದ್ಯಂತ ಮಾರ್ಚ್ 20ರಂದು ಸಾರ್ವತ್ರಿಕ ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಎಚ್.ವಿ ದರ್ಶನ್ ಮತ್ತು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಆದೇಶಿಸಿದ್ದಾರೆ.