ಸುಳ್ಯ, ಮಾ. 25 (DaijiworldNews/AA): ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿಯಾಗಿ ಮೆಸ್ಕಾಂ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ನಿಂತಿಕಲ್ಲು ಸಮೀಪ ನಡೆದಿದೆ.

ಮೃತರನ್ನು ಮೆಸ್ಕಾಂನಲ್ಲಿ ಗುತ್ತಿಗೆ ಆಧಾರದ ಮೇಲೆ ಮೀಟರ್ ರೀಡರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಲೋಕನಾಥ (35) ಎಂದು ಗುರುತಿಸಲಾಗಿದೆ.
ಲೋಕನಾಥ ಅವರು ಸುಳ್ಯದಿಂದ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.
ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ರಭಸಕ್ಕೆ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.