ಕುಂದಾಪುರ, ಮಾ. 28 (DaijiworldNews/AK):ಹೆಮ್ಮಾಡಿ ಕಡೆಯಿಂದ ಕುಂದಾಪುರದ ಮಾರ್ಗ ಮಧ್ಯೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಸಿ ವ್ಹೀಲಿಂಗ್ ಮಾಡುತ್ತಿದ್ದ ಸ್ಕೂಟರ್ ಸವಾರನನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.



ಫೌಝಾನ್ ಅಹ್ಮದ್(25) ಬಂಧಿತ ಆರೋಪಿ. ಈತ ಮಾ.20ರಂದು ಸ್ಕೂಟರ್ ನಲ್ಲಿ ಹೆಲ್ಮೆಟ್ ಧರಿಸದೆ ಸಂಚಾರ ನಿಯಮಗಳನ್ನು ಉಲ್ಲಂಸಿ, ಅಪಾಯಕಾರಿ ರೀತಿಯಲ್ಲಿ ವಾಹನವನ್ನು ಚಲಾಯಿಸಿ ನಾನಾ ರೀತಿಯ ಭಂಗಿಗಳಲ್ಲಿ ವೀಲಿಂಗ್ ಮಾಡುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು