ಮಂಗಳೂರು, ಮಾ. 28 (DaijiworldNews/AK): ಜಿಲ್ಲೆಯ ವಿವಿದೆಡೆ ಮಾಚ್.೨೮ ರಂದು ಶನಿವಾರ ಬಾರೀ ಮಳೆಯಾಗಿದೆ. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ ಇಳೆಯನ್ನು ತಂಪಾಗಿಸಿದೆ. ಮಳೆ ಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.




ಗುಡುಗು ಸಿಡಿಲು ಸಹಿತವಾಗಿ ಮಳೆ ಸುರಿದ ಪರಿಣಾಮವಾಗಿ ರಾಷ್ಟ್ರೀಯ ಹೆದ್ದಾರಿ ಸಂಚಾರದಲ್ಲೂ ವ್ಯತ್ಯಯ ಉಂಟಾಯಿತು. ಅನಿರೀಕ್ಷಿತ ಮಳೆಯಿಂದಾಗಿ ಜನರು ರಸ್ತೆ ಬದಿಯಲ್ಲಿ ವಾಹನ ನಿಲ್ಲಿಸಿ ಮಳೆ ಬಿಡುವವರೆಗೆ ಕಾಯುವಂತ ಸ್ಥಿತಿ ನಿರ್ಮಾಣವಾಯಿತು.
ಹವಾಮಾನ ಇಲಾಖೆಯ ಪ್ರಕಾರ, ಮಾರ್ಚ್ 27 ರಿಂದ ಏಪ್ರಿಲ್ 2 ರವರೆಗೆ ಕರ್ನಾಟಕದಾದ್ಯಂತ ಮುಂಗಾರು ಪೂರ್ವ ಚಟುವಟಿಕೆಗಳು ತೀವ್ರಗೊಳ್ಳುವ ನಿರೀಕ್ಷೆಯಿದೆ. ಮುಂದಿನ ಏಳು ದಿನಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇಲಾಖೆ ನೀಡಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ ಸುಮಾರು 14–15 ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಿದೆ.