ಬಂಟ್ವಾಳ, ಏ. 06 (DaijiworldNews/TA): ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪುರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ಬಂಟ್ವಾಳ ಸಂಯುಕ್ತ ಆಶ್ರಯದಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಂ ಅವರ 119 ಜನ್ಮ ದಿನಾಚರಣೆ ಸಮಾರಂಭ ಬಿ.ಸಿ.ರೋಡಿನ SGSY ಸಭಾಂಗಣದಲ್ಲಿ ನಡೆಯಿತು.


ಕಾರ್ಯಕ್ರಮವನ್ನು ಬಂಟ್ವಾಳ ತಹಶೀಲ್ದಾರ್ ಮಂಜುನಾಥ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಇಂತಹ ಮಹಾನ್ ವ್ಯಕ್ತಿಗಳ ಆದರ್ಶ ನಮಗೆ ಮಾರ್ಗದರ್ಶನವಾಗಿದೆ. ಇವರ ನಿರಂತರ ಹೋರಾಟಗಳಿಂದ ನಾವು ಸಮಾನವಾದ ಬದುಕು ನಡೆಸಲು ಸಾಧ್ಯವಾಯಿತು. ವಿದ್ಯಾರ್ಥಿಗಳು ಇಂತಹ ಮಹಾನ್ ವ್ಯಕ್ತಿಗಳ ಚರಿತ್ರೆಯ ಪುಸ್ತಕಗಳನ್ನು ಓದಿ ತಿಳಿದುಕೊಳ್ಳಬೇಕು ಎಂದು ಹೇಳಿದರು. ನಾರ್ಶ ಶಾಲಾ ಮುಖ್ಯ ಶಿಕ್ಷಕ ಗೋಪಾಲಕೃಷ್ಣ ನೇರಳಕಟ್ಟೆ ಅವರು ಉಪನ್ಯಾಸ ನೀಡಿದರು. ಬಾಬು ಜಗಜೀವನರಾಂ ರವರ ಸಾಧನೆ ವಿದ್ಯಾರ್ಥಿಗಳಿಗೆ ಸ್ಪೂರ್ತಿಯ ಸೆಲೆಯಾಗಿದೆ.
ಭಾರತ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಿದ ಸಕ್ಕರೆಯ ವ್ಯಕ್ತಿಯಾಗಿದ್ದಾರೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಬಂಟ್ವಾಳ ತಾಲೂಕು ಪಂಚಾಯತ್ ಇ.ಒ.ಸಚಿನ್ ಕುಮಾರ್, ಪುರಸಭೆ ಮುಖ್ಯಾಧಿಕಾರಿ ತೀರ್ಥಪ್ರಸಾದ್ , ಕ್ಷೇತ್ರ ಶಿಕ್ಷಣಾಧಿಕಾರಿ ಮಾಲತಿ, ಮುಖಂಡರಾದ ಬೇಬಿ ಮೈರನ್ ಪಾದೆ ಉಪಸ್ಥಿತರಿದ್ದರು.