ಪುತ್ತೂರು, ಏ. 14 (DaijiworldNews/AK):2023–24ನೇ ಶೈಕ್ಷಣಿಕ ವರ್ಷಕ್ಕೆ ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು (ಸ್ವಾಯತ್ತ) ನಡೆಸಿದ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ದಾಯ್ಜಿವರ್ಲ್ಡ್ ಟಿವಿಯ ನಿರೂಪಕಿ ಲಾವಣ್ಯ ಎಸ್ ಪ್ರಥಮ ರ್ಯಾಂಕ್ ಗಳಿಸಿದ್ದಾರೆ.

ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ 8.66 CGPA ಯೊಂದಿಗೆ ಅಗ್ರಸ್ಥಾನ ಪಡೆದಿದ್ದಾರೆ. ಪುತ್ತೂರಿನ ಕಡೇಶಿವಾಲಯ ನಿವಾಸಿಗಳಾದ ಶ್ರೀಧರ್ ನಾಯಕ್ ಮತ್ತು ವಿಜಯಲಕ್ಷ್ಮಿ ದಂಪತಿಯ ಪುತ್ರಿಯಾಗಿದ್ದಾರೆ.