ಮಂಗಳೂರು,ಏ. 26 (DaijiworldNews/TA): ಕುಂಟಿಕಾನ ಬಸ್ ತಂಗುದಾಣದ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿದ್ದ ಆರೋಪದಡಿ ಮೂವರನ್ನು ಕಾವೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಯೆಯ್ಯಾಡಿ ಪದವು ಗುಂಡಳಿಕೆ ನಿವಾಸಿ ಅಭಿರಾಜ್ (38), ಸುಳ್ಯ ಐವರ್ನಾಡು ನಿವಾಸಿ ಎನ್.ಬಿ. ಲೋಕೇಶ್ (19), ಮೂಲ್ಕಿ ಕಾರ್ನಾಡು ನಿವಾಸಿ ಅರವಿಂದ್ (33) ಎಂದು ಗುರುತಿಸಲಾಗಿದೆ.

ಪೊಲೀಸರು ಗಸ್ತಿನಲ್ಲಿದ್ದಾಗ ಮಾದಕ ವಸ್ತು ಸೇವನೆ ಮಾಡಿದಂತೆ ಕಂಡು ಬಂದ ಆರೋಪಿಗಳನ್ನು ಹಿಡಿದು ವಿಚಾರಿಸಿ ದಾಗ ಮಾದಕ ವಸ್ತು ಸೇವನೆ ಮಾಡಿರುವುದು ತಿಳಿದು ಬಂದಿದೆ. ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಆರೋಪಿಗಳು ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಕಾವೂರು ಠಾಣೆಯ ಪೊಲೀಸರು ತಿಳಿಸಿದ್ದಾರೆ.