ಕಾಸರಗೋಡು, ಜೂ. 06 (DaijiworldNews/TA): ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮವಾಗಿ ಕಾಞಂಗಾಡಿನ ಯುಬಿಎಂಸಿ ಶಾಲೆಯ ಆವರಣ ಗೋಡೆ ಶನಿವಾರ ಸಂಜೆ ಕುಸಿದು ಬಿದ್ದಿದೆ.

ಗೋಡೆ ಕುಸಿದ ವೇಳೆ ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳು ಅಥವಾ ಸಾರ್ವಜನಿಕರು ಇಲ್ಲದ ಕಾರಣ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ. ಇದರಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.
ಭಾರೀ ಮಳೆಯಿಂದಾಗಿ ಗೋಡೆಯ ಅಡಿಪಾಯ ದುರ್ಬಲಗೊಂಡಿರುವುದು ಕುಸಿತಕ್ಕೆ ಕಾರಣ ಎನ್ನಲಾಗುತ್ತಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಳೆಗಾಲದ ಹಿನ್ನೆಲೆಯಲ್ಲಿ ಹಳೆಯ ಕಟ್ಟಡಗಳು ಹಾಗೂ ಶಾಲಾ ಆವರಣಗಳ ಸುರಕ್ಷತೆ ಬಗ್ಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.