ಉಡುಪಿ, ಜೂ. 25 (DaijiworldNews/AA): ಶಾಲಾ ಬಸ್ ಒಂದು ಡಿವೈಡರ್ಗೆ ಡಿಕ್ಕಿ ಹೊಡೆದ ಘಟನೆ ಮಣಿಪಾಲದಲ್ಲಿ ಜೂನ್ 25ರಂದು ಬೆಳಗ್ಗೆ ನಡೆದಿದೆ.




ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್, ಮಣಿಪಾಲದಿಂದ ಉಡುಪಿಯ ಕಡೆಗೆ ಸಂಚರಿಸುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ.
ಅದೃಷ್ಟವಶಾತ್, ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಅಥವಾ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.
ಸ್ಥಳಕ್ಕೆ ಮಣಿಪಾಲ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.